ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ "ಲಂಕಾ" ಬ್ಯಾಟರ್!

ಫೆಬ್ರವರಿ 5, 2025 - 09:07
 0  8
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ "ಲಂಕಾ" ಬ್ಯಾಟರ್!

ಲಂಕಾ ತಂಡದ ಆರಂಭಿಕ ಬ್ಯಾಟರ್ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ವಿದಾಯ ಹೇಳಲಿದ್ದಾರೆ.

ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ತಮ್ಮ 100ನೇ ಟೆಸ್ಟ್​ ಪಂದ್ಯದ ಮೂಲಕ ಎಂಬುದು ವಿಶೇಷ. ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ದಿಮುತ್ 100 ಟೆಸ್ಟ್ ಪಂದ್ಯಗಳ ಸಾಧನೆ ಮಾಡಲಿದ್ದಾರೆ.

ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಕೊನೆಗೊಳಿಸಲು ದಿಮುತ್ ಕರುಣರತ್ನೆ ನಿರ್ಧರಿಸಿದ್ದಾರೆ. ಅದರಂತೆ ಫೆಬ್ರವರಿ 10 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ.

ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಈವರೆಗೆ 99 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 189 ಇನಿಂಗ್ಸ್ ಆಡಿರುವ ಅವರು 1 ದ್ವಿಶತಕ, 16 ಶತಕಗಳೊಂದಿಗೆ ಒಟ್ಟು 7172 ರನ್ ಕಲೆಹಾಕಿದ್ದಾರೆ. ಹಾಗೆಯೇ 39 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow