ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್..! ಯಾಕೆ ಗೊತ್ತಾ..?

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ಬಳಿಕ ಇದೀಗ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ದಾಸ ಇದೀಗ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿ ಆಗ್ತಿದ್ದಾರೆ. ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಡೆವಿಲ್ ದಿ ಹೀರೋ' ಸೆಕೆಂಡ್ ಶೆಡ್ಯೂಲ್ ಶೂಟಿಂಗ್ ಶುರುವಾಗಿದೆ.
ಇದರ ಬೆನ್ನಲ್ಲೇ ದರ್ಶನ್ ಅವರ ಅಕ್ಕನ ಮಗ ಚಂದುಗೆ ಅಭಿಮಾನಿಯೊಬ್ಬ ಕಾಲಿಗೆ ಬಿದ್ದಿದ್ದಾನೆ. ಈ ಬಗ್ಗೆ ದಾಸ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಇನ್ಸ್ಟಾದಲ್ಲಿ ವಿಡಿಯೋ ಹಂಚಿಕೊಂಡ ದರ್ಶನ್, ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ಇನ್ಸ್ಟಾದಲ್ಲಿ ಚಂದುಗೆ ಕಾಲಿಗೆ ಬೀಳುತ್ತಿರುವ ವಿಡಿಯೋವನ್ನ ಪೋಸ್ಟ್ ಮಾಡಿದ ದರ್ಶನ್ ಅವರು, ಈ ರೀತಿ ಬರೆದು ಹೇಳಿದ್ದಾರೆ.
ಎಲ್ಲಾ ನನ್ನ ಸೆಲೆಬ್ರಿಟಿಸ್ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ಮನಸಿಗೆ ತುಂಬಾ ನೋವಾಗಿದೆ.
ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಸಿನಿಮಾದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ ಎಂದು ಬರೆದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






