ಅಕ್ರಮ ಗಣಿಗಾರಿಕೆ ಕೇಸ್ʼನಲ್ಲಿ ಮಾಜಿ ಸಚಿವನಿಗೆ ಶಾಕ್‌! ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ!

ಮೇ 6, 2025 - 16:27
 0  25
ಅಕ್ರಮ ಗಣಿಗಾರಿಕೆ ಕೇಸ್ʼನಲ್ಲಿ ಮಾಜಿ ಸಚಿವನಿಗೆ ಶಾಕ್‌! ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ!

ನವದೆಹಲಿ: ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಬಿ.ವಿ.ಶ್ರೀನಿವಾಸರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದರು. ಜನಾರ್ದನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು ಪ್ರಕಟಿಸಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕೇಸ್‌ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು. ಆರೋಪ ಪ್ರಕರಣದ ವಾದ - ಪ್ರತಿವಾದವನ್ನು ಆಲಿಸಿದ ಸಿಬಿಐ ನ್ಯಾಯಾಲಯವು ಮೇ 6ಕ್ಕೆ ತೀರ್ಪು ನೀಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.

ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆ ನಡೆದಿತ್ತು. ಮೂರು ಸಾವಿರಕ್ಕೂ ಅಧಿಕ ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.
 ಮಾಜಿ ಸಚಿವ ಮತ್ತು ಹಾಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ 8 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 420, 409, 468 ಮತ್ತು 471 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2) ಜೊತೆಗೆ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow