ಅಕ್ರಮ ಬೆಟ್ಟಿಂಗ್ ಪ್ರಕರಣ: ಕೈ “ಶಾಸಕ” ವೀರೇಂದ್ರಗೆ ಸೇರಿದ 55 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

ಸೆಪ್ಟೆಂಬರ್ 4, 2025 - 09:01
 0  15
ಅಕ್ರಮ ಬೆಟ್ಟಿಂಗ್ ಪ್ರಕರಣ: ಕೈ “ಶಾಸಕ” ವೀರೇಂದ್ರಗೆ ಸೇರಿದ 55 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

ಬೆಂಗಳೂರು: ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ)ಗೆ ಇಡಿ ಅಧಿಕಾರಿಗಳು ಮತ್ತೊಂದು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದ್ದಾರೆ.

ಅಲ್ಲದೇ 5 ದುಬಾರಿ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದೆ. ಸದ್ಯ ಇಡಿ ವಶದಲ್ಲಿರುವ ಶಾಸಕ ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿ 55 ಕೋಟಿ ರೂ. ಫ್ರೀಜ್ ಮಾಡಿದ್ದಾರೆ.

ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು. ಸತತ 18 ಗಂಟೆಗೂ ಹೆಚ್ಚು ಕಾಲ ಇಡಿ ಅಧಿಕಾರಿಗಳು ಪಪ್ಪಿ ಕೋಟೆಯನ್ನು ಜಾಲಾಡಿದ್ದರು. ಈ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿತ್ತು. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ ಜಪ್ತಿ ಮಾಡಲಾಗಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow