ಅಕ್ರಮ ಹಣ ವರ್ಗಾವಣೆ ಆರೋಪ: ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಇಡಿ ಕಸ್ಟಡಿಗೆ!

ಆಗಸ್ಟ್ 24, 2025 - 16:15
 0  16
ಅಕ್ರಮ ಹಣ ವರ್ಗಾವಣೆ ಆರೋಪ: ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಇಡಿ ಕಸ್ಟಡಿಗೆ!

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ನೀಡಲಾಗಿದೆ. ಬೆಂಗಳೂರು 35ನೇ ಸಿಸಿಹೆಚ್ ನ್ಯಾಯಾಲಯವು ಆಗಸ್ಟ್ 28ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.

ಇಡಿ ಪರ ವಕೀಲರು, “ಕೋಟ್ಯಾಂತರ ರೂಪಾಯಿ ನಗದು, ಕೆಜಿಗಳಷ್ಟು ಚಿನ್ನ ಪತ್ತೆಯಾಗಿದೆ. ವಿದೇಶಗಳಲ್ಲಿ ವ್ಯವಹಾರ ನಡೆಸಿರುವುದು, ಕ್ಯಾಸಿನೋ ಹಾಗೂ ಆನ್ಲೈನ್ ಬೆಟ್ಟಿಂಗ್ ಸೈಟ್ಗಳಲ್ಲಿ ಅಕ್ರಮ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಎಲ್ಲದಕ್ಕೂ ಸಂಬಂಧಿಸಿ ವಿಚಾರಣೆ ಅಗತ್ಯವಿದೆಎಂದು ನ್ಯಾಯಾಲಯದಲ್ಲಿ ಮನವಿ ಮಾಡಿದರು.

ಇನ್ನು ವಿರೇಂದ್ರ ಪಪ್ಪಿ ಪರ ವಕೀಲರು, “ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲಎಂದು ವಾದಿಸಿದರು. ಎರಡೂ ಕಡೆಯ ವಾದ ಆಲಿಸಿದ ನಂತರ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ಅವರು, ಆಗಸ್ಟ್ 28ರವರೆಗೆ ಶಾಸಕರನ್ನು ಇಡಿ ವಶಕ್ಕೆ ನೀಡುವಂತೆ ಆದೇಶ ಹೊರಡಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow