ಅಕ್ರಮ ಹಣ ವರ್ಗಾವಣೆ: ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್!
ಕಾರವಾರ:- ಅಕ್ರಮ ಹಣ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ರನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಆಗಸ್ಟ್ ತಿಂಗಳ 13 ಹಾಗೂ 14 ರಂದು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಮಾತ್ರವಲ್ಲ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಕೂಡ ಫ್ರೀಜ್ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧಿಸಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ
ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು,
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದರು. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು
ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಬಳಿಕ ನ್ಯಾಯಮೂರ್ತಿ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಗಿದೆ
ನಿಮ್ಮ ಪ್ರತಿಕ್ರಿಯೆ ಏನು?