ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತೀಶ್ ಸೈಲ್ʼಗೆ 7 ದಿನಗಳ ಮಧ್ಯಂತರ ಜಾಮೀನು

ಸೆಪ್ಟೆಂಬರ್ 11, 2025 - 21:03
ಸೆಪ್ಟೆಂಬರ್ 11, 2025 - 18:15
 0  12
ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತೀಶ್ ಸೈಲ್ʼಗೆ 7 ದಿನಗಳ ಮಧ್ಯಂತರ ಜಾಮೀನು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು 7 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬುಧವಾರ ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಅವರನ್ನು 2 ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಲು ಆದೇಶಿಸಿತ್ತು. ಆದರೆ ಉಸಿರಾಟದ ಸಮಸ್ಯೆ ಮತ್ತು ಡಯಾಬಿಟಿಸ್ ಸೇರಿದಂತೆ ಅನಾರೋಗ್ಯದ ಹಿನ್ನೆಲೆ, ನ್ಯಾಯಾಲಯ ಇದೀಗ ಮಧ್ಯಂತರ ಜಾಮೀನು ನೀಡಿದೆ.

ಇತ್ತೀಚೆಗೆ ಇಡಿ (ED) ಅಧಿಕಾರಿಗಳು ಸೈಲ್ ಅವರ ಮನೆ ಮೇಲೆ ದಾಳಿ ನಡೆಸಿ, ₹1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್ಗಳು ಹಾಗೂ ₹14.13 ಕೋಟಿ ಮೊತ್ತದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow