ಅಜ್ಜಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿಸಿದ ಶಿಕ್ಷಕ ಅರೆಸ್ಟ್.!

ಅಕ್ಟೋಬರ್ 22, 2025 - 11:14
 0  22
ಅಜ್ಜಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿಸಿದ ಶಿಕ್ಷಕ ಅರೆಸ್ಟ್.!

ಚಿತ್ರದುರ್ಗ:  ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ವೇದ ಪಾಠಶಾಲೆಯಲ್ಲಿ ಅಜ್ಜಿಗೆ ಫೋನ್ ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ 9 ವರ್ಷದ ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು. ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಶಿಕ್ಷಕ ವೀರೇಶ್ ಹಿರೇಮಠ್‌ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಪ್ರಕಟಿಸಿದ್ದಾರೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow