ಅಜ್ಜಿಗೆ ಫೋನ್ ಮಾಡಿದ್ದೇ ತಪ್ಪಾಯ್ತಾ..? ವಿದ್ಯಾರ್ಥಿ ಮೇಲೆ ಮನಸೋ ಇಚ್ಛೆ ಹಲ್ಲೆ! ಕೈ ಮುಗಿದ್ರೂ ಬಿಡದ ಶಿಕ್ಷಕ
ಚಿತ್ರದುರ್ಗ: ವಿದ್ಯಾರ್ಥಿ ತನ್ನ ಅಜ್ಜಿಗೆ ಫೋನ್ ಮಾಡಿದುದನ್ನು ಪ್ರಶ್ನಿಸಿದ ಶಿಕ್ಷಕ, ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗದ ನಾಯಕನಹಟ್ಟಿ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ ಈ ಘಟನೆ ನಡೆದಿದೆ. 9 ವರ್ಷದ ವಿದ್ಯಾರ್ಥಿ ತರುಣ್ ಎಂಬಾತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಎಂಬುವವರು ವಿದ್ಯಾರ್ಥಿಗೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿದ ಬಂದಿದೆ. ವಿದ್ಯಾರ್ಥಿ ಕೈ ಮುಗಿದ್ರೂ ಬಿಡದೆ ಕಾಲಲ್ಲಿ ತುಳಿದು ಮನಸೋ ಇಚ್ಚೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗ್ತಿದೆ.
ಈ ಗ್ರಾಮದಲ್ಲಿರುವ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದಾಧ್ಯಯನ ಶಾಲೆಯಲ್ಲಿ ವಿವಿದೆಡೆಯ ಹಲವು ವಿದ್ಯಾರ್ಥಿಗಳು ವೇದಾಧ್ಯಯನ ಮಾಡುತ್ತಿದ್ದಾರೆ. ಅವರಲ್ಲಿ ಉತ್ತರ ಕರ್ನಾಟಕ ಮೂಲದ ಓರ್ವ ವಿದ್ಯಾರ್ಥಿ ಮೇಲೆ ವೀರೇಶ್ ಹಿರೇಮಠ್ ಎಂಬ ಮುಖ್ಯ ಶಿಕ್ಷಕ ಮನಸೋಇಚ್ಛೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿದ್ದಾನೆ.
ಇದರ ಬೆನ್ನಲ್ಲೇ ಶಿಕ್ಷಕ ವಿರೇಶ್ ನಾಪಾತ್ತೆಯಾಗಿದ್ದಾನೆ. ಈ ರೀತಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆದ ಹಿನ್ನೆಲೆ ಸಾರ್ವಜನಿಕ ವಲಯದಿಂದ ಬಾರಿ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?