ಅತ್ಯಾಚಾರ ಕೇಸ್: ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಹೈಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಆರೋಪ ನಿಗದಿ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ತಡೆ ಹಿಡಿಯುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಒಂದು ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.ಇದೇ ಜನವರಿ 13 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಪ ನಿಗದಿ ಪ್ರಕ್ರಿಯೆ ಆರಂಭಿಸಲು ದಿನಾಂಕ ನಿಗದಿಯಾಗಿತ್ತು.
ಆದರೆ, ಇದೀಗ ಹೈಕೋರ್ಟ್‌ನೊಂದ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಇನ್ನು ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜ.16ಕ್ಕೆ ಮುಂದೂಡಿಕೆ ಮಾಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಆದೇಶ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






