ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಸುಮಲತಾ ಅಂಬರೀಶ್ ಹೇಳಿದ್ದೇನು..?
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಆಘಾತ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕೋರ್ಟ್ ತನ್ನ ತೀರ್ಪಿನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ 4 ಕೇಸ್ಗಳ ಪೈಕಿ ಇಂದು ಒಂದು ಪ್ರಕರಣದ ತೀರ್ಪು ಮಾತ್ರ ಪ್ರಕಟವಾಗಿದೆ. ಮನೆ ಕೆಲಸದಾಕೆ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಈ ಪ್ರಕರಣದಲ್ಲಿ ಪ್ರಜ್ವಲ್ ದೋಷಿ ಎಂದು ಕೋರ್ಟ್ ಹೇಳಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧೀಸಿದಂತೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೇ ನೀಡಿದ್ದು, ಕೋರ್ಟೇ ತೀರ್ಪು ನೀಡಿದ ಬಳಿಕ ನಾನು ಹೇಳೋದೇನಿರುತ್ತೆ? ಕೋರ್ಟ್ ತೀರ್ಪು ಎಂದರೆ ಮುಗೀತು, ಎಲ್ಲರೂ ಅದರ ಆದೇಶವನ್ನು ಪಾಲಿಸಬೇಕು, ಇದು ಕೋರ್ಟ್ ನೀಡಿರುವ ಆದೇಶ ಮತ್ತು ಅದರ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲದೆ ಕಾರಣ ಕಾಮೆಂಟ್ ಮಾಡಲಾರೆ ಎಂದು ಸುಮಲತಾ ಅಂಬರೀಷ್ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?