ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್!

ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾದರಲ್ಲಿದ್ದರು. ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದು ಹೊರಬರುತ್ತಿದ್ದಂತೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






