ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ CP ಯೋಗೇಶ್ವರ್!

ಅಕ್ಟೋಬರ್ 24, 2024 - 13:55
 0  15
ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ CP ಯೋಗೇಶ್ವರ್!

ರಾಮನಗರ: ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇನ್ನೂ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ರ್ಯಾಲಿ ನಡೆಸಿದ್ದಾರೆ. ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.

ಬಳ್ಳಾರಿ ಕಾಂಗ್ರೆಸ್ ಸಂಸದ ಇ ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ ಅವರು ಸಂಡೂರು ಉಪಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದ ಅಖಾಡಕ್ಕೆ ಇಳಿದಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow