ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ನ ವರದಿ: ಫ್ಲೂಯಿಡ್‌ನಲ್ಲಿ ಎಂಡೋ ಟಾಕ್ಸಿನ್ ಎಂಬ ಬ್ಯಾಕ್ಟೀರಿಯಾ ಅಂಶ ಪತ್ತೆ!

ಫ್ಲೂಯಿಡ್‌ನಲ್ಲಿ ಎಂಡೋ ಟಾಕ್ಸಿನ್ ಎಂಬ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. ಇದು ಸಾವಿಗೆ ಕಾರಣವಾಗುವಂತಹ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ಬಾಣಂತಿಯರಿಗೆ ಕೊಟ್ಟಿದ್ದ ಗ್ಲೂಕೋಸ್ ನಲ್ಲಿ ನ್ಯೂನತೆ ಕಂಡು ಬಂದಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಲು ಗ್ಲೂಕೋಸ್ ಕಾರಣವಾಗಿದೆ.
ಯೋಗ್ಯವಲ್ಲದ ಐವಿ ಫ್ಲೂಯಿಡ್ ಬಳಕೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 3 ಬ್ಯಾಚ್ ಫ್ಲೂಯಿಡ್ ನಲ್ಲಿ 1 ಬ್ಯಾಚ್ ನ ವರದಿ ಇದೀಗ ಅಧಿಕಾರಿಗಳ ಕೈ ಸೇರಿದೆ. ಇನ್ನೂ ಎರಡು ಬ್ಯಾಚ್ ನ ವರದಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಬರಲಿದೆ.
ಬಾಣಂತಿಯರ ಸರಣಿ ಸಾವು ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆ ಮೇಲೆ ದಾಳಿ ಮಾಡಿದ್ದರು. ಲೋಕಾಯುಕ್ತ ಡಿವೈಎಸ್‌ಪಿ ವಸಂತ ಕುಮಾರ್ ಹಾಗೂ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ನೇತೃತ್ವದಲ್ಲಿ ಒಟ್ಟು 15 ಅಧಿಕಾರಿಗಳ ತಂಡ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






