ಅನೈಸರ್ಗಿಕ ಲೈಂಗಿಕ ಆರೋಪ ಸುಳ್ಳು: ಸಿಐಡಿಯಿಂದ ಬಿ ರಿಪೋರ್ಟ್ ಸಲ್ಲಿಕೆ! ಸೂರಜ್ ರೇವಣ್ಣಗೆ ಬಿಗ್ ರಿಲೀಫ್

ಜೂನ್ 26, 2025 - 10:48
 0  15
ಅನೈಸರ್ಗಿಕ ಲೈಂಗಿಕ ಆರೋಪ ಸುಳ್ಳು: ಸಿಐಡಿಯಿಂದ ಬಿ ರಿಪೋರ್ಟ್ ಸಲ್ಲಿಕೆ! ಸೂರಜ್ ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024 ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.

ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024 ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow