ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: RCB ಸ್ಟಾರ್ ವೇಗಿ ವಿರುದ್ಧ ಪೋಕ್ಸೊ ಕೇಸ್!

ಜುಲೈ 25, 2025 - 14:04
 0  10
ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: RCB ಸ್ಟಾರ್ ವೇಗಿ ವಿರುದ್ಧ ಪೋಕ್ಸೊ ಕೇಸ್!

ಜೈಪುರ:- ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ RCB ಸ್ಟಾರ್ ವೇಗಿ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. 

ಬಾಲಕಿಯೊಬ್ಬಳ ಮೇಲೆ 2‌ ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ವೇಗಿ ಯಶ್ ದಯಾಳ್‌ಗೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಕೇಸ್‌ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ. 

ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow