ಅಮ್ಮನನ್ನೇ ಕೊಂ*ದ ಅಪ್ರಾಪ್ತ ಮಗಳು! ಈ ಐನಾತಿ ಹುಡುಗಿಯ ಪ್ಲಾನ್​ ಹೇಗಿತ್ತು ಗೊತ್ತಾ !?

ಅಕ್ಟೋಬರ್ 31, 2025 - 22:06
 0  17
ಅಮ್ಮನನ್ನೇ ಕೊಂ*ದ ಅಪ್ರಾಪ್ತ ಮಗಳು! ಈ ಐನಾತಿ ಹುಡುಗಿಯ ಪ್ಲಾನ್​ ಹೇಗಿತ್ತು ಗೊತ್ತಾ !?

ಬೆಂಗಳೂರು: ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ನಡೆದ ಮಹಿಳೆಯ ಅಸಹಜ ಸಾವು ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಶನಿವಾರ ವರದಿಯಾದ ನೇತ್ರಾವತಿ (34) ಸಾವು ಆತ್ಮಹತ್ಯೆ ಅಲ್ಲ, ಕೊಲೆ ನಡೆದಿರುವುದು ತನಿಖೆಯಲ್ಲಿ ಬಯಲಿಗೆ ಬಂದಿದೆ.

ಪೊಲೀಸರು ನಡೆಸಿದ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ನೇತ್ರಾವತಿಯನ್ನ ಆಕೆಯ ಅಪ್ರಾಪ್ತ ಮಗಳು, ಆಕೆಯ ಪ್ರಿಯಕರ ಹಾಗೂ ಆತನ ಮೂವರು ಸ್ನೇಹಿತರು ಸೇರಿ ಒಟ್ಟು ಐವರು ಅಪ್ರಾಪ್ತರು ಸೇರಿ ಕೊಲೆ ಮಾಡಿದ್ದಾರೆ.

ನೇತ್ರಾವತಿಯ ಮಗಳು ಕೆಲಕಾಲದಿಂದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಕಳೆದ ಶನಿವಾರ ರಾತ್ರಿ ಪ್ರಿಯಕರ ಹಾಗೂ ಅವನ ಮೂವರು ಸ್ನೇಹಿತರೊಂದಿಗೆ ಮನೆಗೆ ಬಂದಿದ್ದಳು. ನೇತ್ರಾವತಿ ಮಲಗಿದ್ದಾಗ ಇವರಿಬ್ಬರು ಮನೆಗೆ ಬಂದಿದ್ದು, ಇದರಿಂದ ಕೋಪಗೊಂಡ ನೇತ್ರಾವತಿ ಬೈದಿದ್ದಾರೆ. ಈ ವೇಳೆ ಮಾತಿನ ಚಕಮಕಿ ಜಗಳಕ್ಕೆ ತಿರುಗಿ, ಕೋಪಗೊಂಡ ಮಗಳು ಹಾಗೂ ಆಕೆಯ ಸ್ನೇಹಿತರು ನೇತ್ರಾವತಿಯ ಬಾಯಿ ಮುಚ್ಚಿ ಟವಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ.

ಘಟನೆಯ ನಂತರ, ಆತ್ಮಹತ್ಯೆ ಎಂದು ತೋರಿಸಲು ಆರೋಪಿಗಳು ನೇತ್ರಾವತಿಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನ್‌ಗೆ ನೇತುಹಾಕಿ ಮನೆ ಲಾಕ್ ಮಾಡಿ ಪರಾರಿಯಾಗಿದ್ದಾರೆ. ಮರುದಿನ ನೇತ್ರಾವತಿಯ ಅಕ್ಕ ಕರೆ ಮಾಡಿದರೂ ಪ್ರತಿಕ್ರಿಯೆ ಬರದ ಕಾರಣ ಮನೆಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ನೇತ್ರಾವತಿಯ ಶವ ಪತ್ತೆಯಾಯಿತು. ಪ್ರಾಥಮಿಕವಾಗಿ ಪೊಲೀಸರು ಅಸಹಜ ಸಾವು (UDR) ಎಂದು ಪ್ರಕರಣ ದಾಖಲಿಸಿದ್ದರು.

ಆದರೆ ಶವ ಸಂಸ್ಕಾರಕ್ಕೂ ನೇತ್ರಾವತಿಯ ಮಗಳು ಹಾಜರಾಗದಿರುವುದು ಕುಟುಂಬಕ್ಕೆ ಅನುಮಾನ ಮೂಡಿಸಿತು. ಮಗಳು ನಾಪತ್ತೆ ಕುರಿತಂತೆ ದೂರು ದಾಖಲಿಸಿದ ನಂತರ ಪೊಲೀಸರು ತನಿಖೆ ನಡೆಸಿ ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅಪ್ರಾಪ್ತರ ಗ್ಯಾಂಗ್‌ನಿಂದ ನಡೆದ ಕೊಲೆ ರಹಸ್ಯ ಬಯಲಾಯಿತು. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow