ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಗುಡ್ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ ಸಿನಿಮಾ ‘ಪುಷ್ಪ 2! ಯಾವಾಗ?

ಮಾರ್ಚ್ 28, 2025 - 18:29
 0  7
ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಗುಡ್ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ ಸಿನಿಮಾ ‘ಪುಷ್ಪ 2! ಯಾವಾಗ?

ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕಲರ್ಸ್ ಕನ್ನಡದಲ್ಲಿ ಪುಷ್ಪ 2 ಸಿನಿಮಾ ಪ್ರಸಾರವಾಗಲಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. 

ಪುಷ್ಪ 2’ ಸಿನಿಮಾ ಡಿಸೆಂಬರ್ 5ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬಂತು. ಈ ಚಿತ್ರ ಥಿಯೇಟರ್​​ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಪ್ರದರ್ಶನ ಕಂಡು 1,700 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈ ಚಿತ್ರವು ಆ ಬಳಿಕ ಒಟಿಟಿಯಲ್ಲಿ ಬಿಡುಗಡೆ ಕಂಡಿತು.

ಈಗ ಈ ಚಿತ್ರದ ಕನ್ನಡ ವರ್ಷನ್ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ‘ಬರ್ತಿದೆ ವೈಲ್ಡ್ ಬ್ಲಾಕ್‍‍ಬಸ್ಟರ್ ಸಿನಿಮಾ. ಪುಷ್ಪ 2 ಸಿನಿಮಾ, ಶೀಘ್ರದಲ್ಲಿ’ ಎಂದು ಕಲರ್ಸ್​ ಕನ್ನಡ ಪ್ರೋಮೋ ಹಂಚಿಕೊಂಡು ಅದಕ್ಕೆ ಕ್ಯಾಪ್ಶನ್ ನೀಡಿದೆ. ಅನೇಕರು ಈ ಸಿನಿಮಾದ ಪ್ರಸಾರ ದಿನಾಂಕ ಘೋಷಣೆ ಮಾಡಿ ಎನ್ನುವ ಬೇಡಿಕೆಯನ್ನು ಇಟ್ಟಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗಲಿದೆ.

ಹಬ್ಬ-ಹರಿದಿನಗಳಂದು ಸೂಪರ್ ಹಿಟ್ ಚಿತ್ರಗಳನ್ನು ಪ್ರಸಾರ ಮಾಡೋದು ವಾಡಿಕೆ. ಅಂತೆಯೇ, ‘ಭೀಮ’ ಚಿತ್ರ ಕಲರ್ಸ್ ಕನ್ನಡದಲ್ಲಿ ಯುಗಾದಿ ಪ್ರಯುಕ್ತ ಮಾರ್ಚ್ 30ರಂದು ಸಂಜೆ 7.30ಕ್ಕೆ  ಪ್ರಸಾರ ಕಾಣಲಿದೆ ಎಂದು ತಿಳಿಸಲಾಗಿದೆ. ಹೀಗಿರುವಾಗಲೇ ಮತ್ತೊಂದು ಸಿನಿಮಾದ ಪ್ರಸಾರ ಕಾಣಲಿದೆ ಎಂದು ಘೋಷಣೆ ಮಾಡಲಾಗಿದೆ.

ಪುಷ್ಪ’ ಚಿತ್ರದ ಮುಂದುವರಿದ ಭಾಗವಾಗಿ ‘ಪುಷ್ಪ 2’ ಸಿನಿಮಾ ಸಿದ್ಧವಾಯಿತು. ಈ ಚಿತ್ರಕ್ಕೆ ಇನ್ನು ಮೂರನೇ ಭಾಗ ಕೂಡ ಬರಲಿದೆ. ‘ಮೈತ್ರಿ ಮೂವೀ ಮೇಕರ್ಸ್’ ಚಿತ್ರವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow