ಅವರಿಬ್ಬರೇ ರಾಜಕಾರಣ ಮಾಡುವುದಾದರೆ ನಾವ್ಯಾಕೆ!? CM, DCM ವಿರುದ್ಧ ಪರಮೇಶ್ವರ್ ಅಸಮಾಧಾನ!

ಡಿಸೆಂಬರ್ 5, 2024 - 22:41
 0  16
ಅವರಿಬ್ಬರೇ ರಾಜಕಾರಣ ಮಾಡುವುದಾದರೆ ನಾವ್ಯಾಕೆ!? CM, DCM ವಿರುದ್ಧ ಪರಮೇಶ್ವರ್ ಅಸಮಾಧಾನ!

ಬೆಂಗಳೂರು:- ಅವರಿಬ್ಬರೇ ರಾಜಕಾರಣ ಮಾಡುವುದಾದರೆ ನಾವ್ಯಾಕೆ ಬೇಕು!? ಎಂದು ಹೇಳುವ ಮೂಲಕ CM, DCM ವಿರುದ್ಧ ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ

ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಸಚಿವರು, 

ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ.

ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ​ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ‌ಹೇಳಿದರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಜನ ಸ್ವಾಭಿಮಾನಿ ಒಕ್ಕೂಟಗಳನ್ನು ಮಾಡಿಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ, ಸರ್ಕಾರಕ್ಕೆ ಸಿಂಪಥೈಸರ್ಸ್. ಅವರೊಂದಿಗೆ ಪಕ್ಷವೂ ಸೇರಿದೆ. ಎಲ್ಲ ಒಟ್ಟಿಗೆ ಸೇರಿ ಸಮಾವೇಶ ಮಾಡುತ್ತಿದ್ದೇವೆ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow