ಅವಾಚ್ಯ ಶಬ್ದ ಬಳಸಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ: ಸಿಟಿ ರವಿಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್!

ಬೆಂಗಳೂರು:- ಅವಾಚ್ಯ ಶಬ್ದ ಬಳಸಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಪ್ರಕರಣ ಸಂಬಂಧ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಹಿನ್ನಡೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಇದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.
ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದರು. ಇದೇ ವೇಳೆ ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






