ಅಶ್ಲೀಲ ಪದ ಬಳಕೆ: CT ರವಿ ಮಾತಿಗೆ ಗಳಗಳನೆ ಕಣ್ಣೀರು ಹಾಕಿದ ಲಕ್ಷ್ಮಿ ಹೆಬ್ಬಾಳ್ಕರ್!

ಡಿಸೆಂಬರ್ 19, 2024 - 16:03
 0  34
ಅಶ್ಲೀಲ ಪದ ಬಳಕೆ: CT ರವಿ ಮಾತಿಗೆ ಗಳಗಳನೆ ಕಣ್ಣೀರು ಹಾಕಿದ ಲಕ್ಷ್ಮಿ ಹೆಬ್ಬಾಳ್ಕರ್!

ಬೆಳಗಾವಿ:- ಪರಿಷತ್‌ನಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಳಗಳನೆ ಕಣ್ಣೀರು ಹಾಕಿದ್ದಾರೆ. 

ಕಲಾಪದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಸಿ.ಟಿ ರವಿ ಮಾತಿಗೆ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಅರ್ಧ ಗಂಟೆಗಳ‌ ಕಾಲ‌ ಮುಂದೂಡಿಕೆ ಮಾಡಿದ್ದಾರೆ.

ಅಶ್ಲೀಲ ಪದ ಬಳಕೆ ನೊಂದಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಅಷ್ಟು ಆಡಿಯೋ, ವಿಡಿಯೋ ಪರಿಶೀಲಿಸಲು ಸೂಚನೆ ನೀಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow