ಆಘಾತಕಾರಿ ಘಟನೆ: ಲವರ್ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್

ಸೆಪ್ಟೆಂಬರ್ 17, 2025 - 22:05
 0  19
ಆಘಾತಕಾರಿ ಘಟನೆ: ಲವರ್ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್

ಭುವನೇಶ್ವರ:- ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನ ಎದುರಲ್ಲೇ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಹೀನ ಕೃತ್ಯ ಒಡಿಶಾದ ಪುರಿಯ ಬೀಚ್ ಬಳಿ ಜರುಗಿದೆ.

ಯುವತಿಯು ಪ್ರಿಯಕರನೊಂದಿಗೆ ಕುಳಿತಿದ್ದಾಗ ಇದನ್ನು ಗಮನಿಸಿದ ಮೂವರು ಆರೋಪಿಗಳು ಅವರ ವೀಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಬಳಿಕ ಅವರ ಬಳಿ ಬಂದು ವೀಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡಲು ನಿರಾಕರಿಸಿದ ವೇಳೆ ಆರೋಪಿಗಳು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಆತನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಎದುರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ

ಯುವತಿಯು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಮೊಬೈಲ್‌ನಲ್ಲಿದ್ದ ವೀಡಿಯೋವನ್ನೂ ಡಿಲೀಟ್ ಮಾಡಿದ್ದಾರೆ. ಎನ್ನಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow