ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾದ ನಾಲ್ವರು ಶಾಲಾ ಮಕ್ಕಳು.. 38 ಮಂದಿಗೆ ಗಾಯ!

ಬಲೂಚಿಸ್ತಾನ:- ಶಾಲಾ ಬಸ್ ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆದಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಜರುಗಿದೆ.
ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜ.
ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಕ್ಕಳ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ಮೃಗಗಳು ಎಂದು ಕರೆದಿದ್ದಾರೆ. ಮುಗ್ದ ಮಕ್ಕಳನ್ನುಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಸಂಪೂರ್ಣ ಅನಾಗರಿಕತೆಯ ಕೃತ್ಯ ಎಂದಿದ್ದಾರೆ.
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಾಲಾ ಬಸ್ ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಿರೋದು ಅನುಮಾನ ಮೂಡಿದೆ. ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






