ಆರೋಗ್ಯ ಕಾಪಾಡುವ ಸಂಜೀವಿನಿ ಈ ಸೊಪ್ಪು..! ಇದರ ಚಮತ್ಕಾರ ತಿಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಮೇ 20, 2025 - 07:00
 0  11
ಆರೋಗ್ಯ ಕಾಪಾಡುವ ಸಂಜೀವಿನಿ ಈ ಸೊಪ್ಪು..! ಇದರ ಚಮತ್ಕಾರ ತಿಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

 

 

ಪುದೀನಾ ಔಷಧೀಯ ಗುಣಗಳನ್ನು ಹೊಂದಿದ್ದು, ಇದರ ಸಂಯುಕ್ತಗಳು ದೇಹದ ಉಷ್ಣತೆಯನ್ನು ಕಡಿಮೆ ಮಾಡಿ, ದೇಹವನ್ನು ಸದಾ ತಂಪಾಗಿರಿಸುತ್ತದೆ. ಹಾಗಾಗಿ ಬೇಸಿಗೆಯಲ್ಲಿ ನಿಂಬೆ, ಕಲ್ಲಂಗಡಿ ಮುಂತಾದ ಹಣ್ಣುಗಳ ಜೊತೆಗೆ ಪುದೀನಾವನ್ನು ಆಹಾರದಲ್ಲಿ ಬೆರೆಸಿ ಸೇವಿಸಬೇಕು. ಪುದೀನ ಎಲೆಗಳು ಆಂಟಿಬ್ಯಾಕ್ಟೀರಿಯಲ್, ಆಂಟಿಆಕ್ಸಿಡೆಂಟ್ ಮತ್ತು ಫೈಟೊನ್ಯೂಟ್ರಿಯೆಂಟ್ಗಳಂತಹ ಗುಣಗಳನ್ನು ಹೊಂದಿವೆ. ಅಲ್ಲದೇ ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ಮಕ್ಕಳಿಗೆ ಅತಿಸಾರ ಭೇದಿ, ವಾಂತಿ ಇದ್ದಾಗ 1 ಚಮಚ ಪುದೀನಾ ರಸ ಬೆಳಗ್ಗೆ ಮತ್ತು ಸಂಜೆ ಕುಡಿಸಿದರೆ ತಕ್ಷಣ ನಿವಾರಣೆಯಾಗುತ್ತದೆ. ಇದನ್ನು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡರೆ ಹಿರಿಯರಿಗೂ ಶೀಘ್ರ ಗುಣವಾಗುತ್ತದೆ.

ಪುದೀನಾ ರಸಕ್ಕೆ ಅರಸಿಣ ಕಲಸಿ ಮೈಗೆ ಲೇಪನ ಮಾಡಿಕೊಂಡು ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ನವೆ, ಉರಿ ಇನ್ನು ಮುಂತಾದ ಚರ್ಮ ವ್ಯಾಧಿಗಳು ನಿವಾರಣೆಯಾಗುತ್ತವೆ. ದೇಹದಲ್ಲಿನ ಉಷ್ಣ ಕಡಿಮೆಯಾಗುತ್ತದೆ.

ಪುದೀನಾ ಎಲೆಗಳ ರಸಕ್ಕೆ ಜೇನುತುಪ್ಪ ಅಥವಾ ಕೆಂಪು ಕಲ್ಲು ಸಕ್ಕರೆ, ನಿಂಬೆಹಣ್ಣಿನ ರಸ ಕಲಸಿ ಸೇವಿಸಿದರೆ ಆಯಾಸ, ನಿಶ್ಯಕ್ತಿ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಿ ಮನಸ್ಸಿಗೆ ಉಲ್ಲಾಸ ಉಂಟುಮಾಡುತ್ತೆ.

ಪುದೀನಾ ಸೊಪ್ಪನ್ನು ನೆರಳಲ್ಲಿ ಒಣಗಿಸಿ ವಸ್ತ್ರಗಾಲಿತ ಚೂರ್ಣ ಮಾಡಿಟ್ಟುಕೊಂಡು, 2 ಲೋಟ ನೀರಿಗೆ 2 ಚಮಚ ಚೂರ್ಣ ಹಾಕಿ, ಒಲೆಯ ಮೇಲಿಟ್ಟು ಚೆನ್ನಾಗಿ ಕುದಿಸಿ 1/2 ಲೋಟ ನೀರಾದಾಗ ಕೆಳಗಿಳಿಸಿ, ಉಗರು ಬೆಚ್ಚಗಿದ್ದಾಗ ಸೋಸಿ ಬೆಳಗ್ಗೆ ಮತ್ತು ಸಂಜೆ ಕುಡಿದರೆ ಸ್ತ್ರೀಯರ ಋತಸ್ರಾವ ಸಮಸ್ಯೆಗಳು ದೂರವಾಗುತ್ತವೆ. ಹೊಟ್ಟೆ ನೋವು ನಿವಾರಣೆಯಾಗಿ ತಿಂಗಳ ಮುಟ್ಟು ಸಕಾಲದಲ್ಲಾಗುತ್ತದೆ. (ಮುಟ್ಟಾಗುವ ಮೂರು ದಿನ ಮೊದಲಿಂದಲೂ ತೆಗೆದುಕೊಳ್ಳಬೇಕು)

ದಿನವು ನಾಲ್ಕೈದು ಪುದೀನಾ ಎಲೆಗಳನ್ನು ಜಗಿದು ತಿನ್ನುವುದರಿಂದ, ಹಲ್ಲುಗಳ ಕದಲುವಿಕೆ, ಹಲ್ಲುಗಳ ನೋವು, ದವಡೆಯಲ್ಲಿ ರಕ್ತಸ್ರಾವ ನಿವಾರಣೆಯಾಗಿ, ವಸಡುಗಳು ದೃಢವಾಗಿ, ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತೆ.

ಪುದೀನಾ ಎಲೆಗಳನ್ನು ಜಜ್ಜಿ ಮೂಸುತ್ತಿದ್ದರೆ, ತಲೆನೋವು, ತಲೆ ಸುತ್ತುವಿಕೆ ಶಮನವಾಗುತ್ತದೆ. ಪುದೀನಾ ಕಷಾಯಕ್ಕೆ ಜೇನುತುಪ್ಪ ಕಲಸಿ ಸೇವಿಸುತ್ತಿದ್ದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಒಂದು ಹಿಡಿಯಷ್ಟು ಪುದೀನಾ ಸೊಪ್ಪನ್ನು ನೀರಲ್ಲಿ ಹಾಕಿ ಕುದಿಸಿ, ನೀರನ್ನು ದಿನಕ್ಕೆ ಮೂರು ಬಾರಿ ಕುಡಿದರೆ ಕೆಮ್ಮು, ನೆಗಡಿ, ಗಂಟಲು ನೋವು, ಬಿಕ್ಕಳಿಕೆ ನಿವಾರಣೆಯಾಗುತ್ತದೆ. 2 ಚಮಚ ಪುದೀನಾ ರಸಕ್ಕೆ 1 ಚಮಚ ಜೇನುತುಪ್ಪ 1 ಚಮಚ ನಿಂಬೆಹಣ್ಣಿನ ರಸ ಕಲಸಿದಾಗ ತುಂಬಾ ರುಚಿಕರವಾದ ಔಷಧಿ ತಯಾರಾಗುತ್ತದೆ. ಇದನ್ನು ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಸೇವಿಸಿದರೆ ಹೊಟ್ಟೆನೋವು, ಉಬ್ಬರ, ಗ್ಯಾಸ್ ಸಮಸ್ಯೆಗಳು ನಿವಾರಣೆಯಾಗುತ್ತವೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow