ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಏಕದಿನ ತಂಡ ಪ್ರಕಟ! ರೋಹಿತ್ ಬದಲಿಗೆ ಗಿಲ್ʼ​ಗೆ ನಾಯಕತ್ವ

ಅಕ್ಟೋಬರ್ 4, 2025 - 16:00
 0  13
ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಏಕದಿನ ತಂಡ ಪ್ರಕಟ! ರೋಹಿತ್ ಬದಲಿಗೆ ಗಿಲ್ʼ​ಗೆ ನಾಯಕತ್ವ

ಮುಂಬೈ: ಈ ಅಕ್ಟೋಬರ್ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗಾಗಿ ಬಿಸಿಸಿಐ ತಂಡ ಟೀಮ್ ಇಂಡಿಯಾ–ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ.ಟಿ20 ಸರಣಿಯಲ್ಲಿ ನಿರೀಕ್ಷೆಯಂತೆ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.

ಏಕದಿನ ಸರಣಿಗಾಗಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡದಲ್ಲಿದ್ದರೂ, ನೂತನ ನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯ ನಿವೃತ್ತಿ ವಿಚಾರ ಮತ್ತೆ ಮುಂದೆ ಬಂದಿದೆ. 

ರೋಹಿತ್ ಹಾಗೂ ವಿರಾಟ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಭಾರತದ ಪರ ಯಾವುದೇ ಪಂದ್ಯವಾಡಿರಲಿಲ್ಲ. ಇದೀಗ ಆರು ತಿಂಗಳುಗಳ ಬಳಿಕ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯಲು ಅಣಿಯಾಗಿದ್ದಾರೆ.

ಇನ್ನು ಈ ಸರಣಿಗಾಗಿ ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ತಂಡದಲ್ಲಿದ್ದು, ಹೆಚ್ಚುವರಿ ಕೀಪರ್ ಸ್ಥಾನದಲ್ಲಿ ಧ್ರುವ್ ಜುರೆಲ್​ಗೆ ಅವಕಾಶ ನೀಡಲಾಗಿದೆ.

ಇನ್ನುಳಿದಂತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್​ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಸರಣಿಗೆ ಭಾರತ ಏಕದಿನ ತಂಡ ಈ ಕೆಳಗಿನಂತಿದೆ…

ಭಾರತ ಏಕದಿನ ತಂಡ : 

ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ಅಕ್ಷರ್ ಪಟೇಲ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ , ಮೊಹಮ್ಮದ್ ಸಿರಾಜ್ , ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್ , ಯಶಸ್ವಿ ಜವಾಲ್ 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow