ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

ಅಕ್ಟೋಬರ್ 26, 2025 - 09:15
 0  12
ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದರೂ, ತಂಡಕ್ಕೆ ದುಃಖದ ಸುದ್ದಿ ಎದುರಾಗಿದೆ. ಪ್ರಮುಖ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಾಯದ ಕಾರಣದಿಂದ ಮುಂದಿನ ಮೂರು ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಇರಬೇಕಾಗಿದೆ.

ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಆ ವೇಳೆ ಅವರು ಮಧ್ಯದಲ್ಲೇ ಮೈದಾನ ತೊರೆಯಬೇಕಾಯಿತು. ಬಳಿಕ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಎಡ ಪಕ್ಕೆಲುಬಿಗೆ ಗಂಭೀರ ಗಾಯವಾಗಿದೆ ಎಂದು ಪತ್ತೆಯಾಗಿದೆ. ವೈದ್ಯರು ಅವರಿಗೆ ಮೂರು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ.

ಇದರಿಂದಾಗಿ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಅವರು ಶೀಘ್ರದಲ್ಲೇ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸರಣಿಯ ಬಳಿಕ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿ ಆಡಲಿದೆ. ಅಯ್ಯರ್ ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ಆ ಸರಣಿಗೆ ಮರಳುವ ನಿರೀಕ್ಷೆ ವ್ಯಕ್ತವಾಗಿದೆ.

 ಭಾರತ ಟಿ20 ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow