ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಮ್ಯಾಚ್: ಟೀಮ್ ಇಂಡಿಯಾದಲ್ಲಿ ನಾಲ್ಕು ಬದಲಾವಣೆ ಸಾಧ್ಯತೆ!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಇಂದು ಆರಂಭವಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ನಾಲ್ಕು ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಪ್ರಮುಖ ಬದಲಾವಣೆಗಳ ವಿವರಣೆ:
ರಿಷಭ್ ಪಂತ್ – ಗಾಯದ ಕಾರಣದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ స్థానಕ್ಕೆ ಬದಲಿ ವಿಕೆಟ್ ಕೀಪರ್ ಆಯ್ಕೆ ಆಗುವ ಸಾಧ್ಯತೆ.
ಜಸ್ಪ್ರೀತ್ ಬುಮ್ರಾ – ನಿರಂತರ ಆಟದಿಂದಾಗಿ ಅವರಿಗೆ ವಿಶ್ರಾಂತಿ ನೀಡಲಾಗುತ್ತಿದೆ. ಇದು ಭಾರತ ಬೌಲಿಂಗ್ ಬಳಗದಲ್ಲಿ ಬದಲಾವಣೆ ಅಗತ್ಯವಿದೆ ಎನ್ನುವುದನ್ನು ಸೂಚಿಸುತ್ತದೆ.
ಆಕಾಶ್ ದೀಪ್ – ತೊಡೆಸಂದು ಗಾಯದಿಂದ ಚೇತರಿಸಿಕೊಂಡು ಸಂಪೂರ್ಣ ಫಿಟ್ ಆಗಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅವರು ಬುಮ್ರಾಗೆ ಬದಲಿ ಆಗುವ ಸಾಧ್ಯತೆ ಇದೆ.
ಕುಲ್ದೀಪ್ ಯಾದವ್ – ಹಿಂದೆ ನಾಲ್ಕು ಪಂದ್ಯಗಳಲ್ಲಿ ಬೆಂಚ್ ಮೇಲೆ ಇದ್ದ ಅನುಭವಿ ಸ್ಪಿನ್ನರ್ ಕುಲ್ದೀಪ್, ಈ ಬಾರಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಇದೆ.
ಅಂತಿಮ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿನ ನಿರ್ಣಾಯಕ ಪಂದ್ಯ. ಏಕೆಂದರೆ 5 ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯವನ್ನು ಇಂಗ್ಲೆಂಡ್ ಗೆದ್ದುಕೊಂಡಿದೆ. ನಾಲ್ಕನೇ ಮ್ಯಾಚ್ ಡ್ರಾನಲ್ಲಿ ಅಂತ್ಯಗೊಂಡರೂ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆ ಹೊಂದಿದೆ.
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11:
- ಕೆಎಲ್ ರಾಹುಲ್,
- ಯಶಸ್ವಿ ಜೈಸ್ವಾಲ್
- ಸಾಯಿ ಸುದರ್ಶನ್
- ಶುಭ್ಮನ್ ಗಿಲ್
- ಧ್ರುವ್ ಜುರೇಲ್ (ವಿಕೆಟ್ ಕೀಪರ್)
- ರವೀಂದ್ರ ಜಡೇಜಾ
- ವಾಷಿಂಗ್ಟನ್ ಸುಂದರ್
- ಕುಲ್ದೀಪ್ ಯಾದದ್
- ಮೊಹಮ್ಮದ್ ಸಿರಾಜ್
- ಆಕಾಶ್ ದೀಪ್ಜ
- ಅರ್ಷದೀಪ್ ಸಿಂಗ್.
ನಿಮ್ಮ ಪ್ರತಿಕ್ರಿಯೆ ಏನು?






