ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭ: ಸರ್ಕಾರದ ವಿರುದ್ಧ ಸಮರಕ್ಕೆ ವಿಪಕ್ಷಗಳ ತಂತ್ರ!
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ರಾಜಕೀಯ ಕದನ ನಡೆಯುವ ಸಾಧ್ಯತೆ ಇದೆ. ಆಗಸ್ಟ್ 22 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸರ್ಕಾರದ ವೈಫಲ್ಯಗಳನ್ನು ಬಯಲುಗೊಳಿಸಲು ತೀವ್ರ ಸಿದ್ಧತೆ ನಡೆಸಿವೆ.
ಬಿಜೆಪಿ–ಜೆಡಿಎಸ್ ನಾಯಕರು ಒಟ್ಟಿಗೆ ಚರ್ಚೆ ನಡೆಸಿ, ಸದನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟ ನಡೆಸಲು ತಂತ್ರ ರೂಪಿಸಿದ್ದಾರೆ. ಸರ್ಕಾರವು ವಿರೋಧ ಪಕ್ಷಗಳ ಟೀಕೆಗೆ ತಕ್ಕ ಪ್ರತಿಕ್ರಿಯೆ ನೀಡಲು ತಯಾರಾಗಿದೆ.
ವಿಪಕ್ಷಗಳ ಪ್ರಮುಖ ಅಸ್ತ್ರಗಳು:
-
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ 11 ಜನರ ಸಾವು
-
ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಂದ ರೈತರಿಗೆ ಉಂಟಾದ ಸಮಸ್ಯೆ
-
ಧರ್ಮಸ್ಥಳದಲ್ಲಿ ನಡೆದ ಕೊಲೆ ಪ್ರಕರಣ
-
SCSP–TSP ನಿಧಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಆರೋಪ
-
ವಿರೋಧ ಪಕ್ಷ ಶಾಸಕರಿಗೆ ಅನುದಾನ ನೀಡದೆ, ಕೇವಲ ಆಡಳಿತ ಪಕ್ಷದ ಶಾಸಕರಿಗೆ ಅನುದಾನ ನೀಡಿರುವುದು
-
ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ಮಂಗಳೂರು ದ್ವೇಷದ ಕೊಲೆ ಪ್ರಕರಣ, ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಹದಗೆಟ್ಟಿರುವುದು
-
ಕಾಂಗ್ರೆಸ್ ಒಳಗಿನ ಸಿಎಂ ಕುರ್ಚಿ ಕಿತ್ತಾಟ
-
ರಾಹುಲ್ ಗಾಂಧಿಯ ಮತಗಳ್ಳತನ ಆರೋಪ, ಸಚಿವ ರಾಜಣ್ಣ ಮತ್ತು ಇಬ್ರಾಹಿಂ ಅವರ ವಿವಾದಾತ್ಮಕ ಹೇಳಿಕೆಗಳು
ನಿಮ್ಮ ಪ್ರತಿಕ್ರಿಯೆ ಏನು?