ಇತಿಹಾಸ ತಿರುಚಬೇಡಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22, 2025 - 16:03
 0  17
ಇತಿಹಾಸ ತಿರುಚಬೇಡಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು: ಸಿಎಂ ಸಿದ್ದರಾಮಯ್ಯ

ಮೈಸೂರು: ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು ಇತಿಹಾಸ ತಿರುಚಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ಬಳಿಕ ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಮೈಸೂರು ಅರಸರು ಆಚರಣೆ ಮಾಡಿದರು.

ನಂತರ ಶ್ರೀರಂಗಪಟ್ಟಣದಲ್ಲಿ ಹೈದರಾಲಿ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು. ಎಲ್ಲರೂ ಇತಿಹಾಸವನ್ನ ತಿಳಿದುಕೊಳ್ಳಬೇಕು. ಆ ಕಾರಣಕ್ಕಾಗಿಯೇ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಂದು ಶಾಲೆಯಲ್ಲೂ ಓದಬೇಕೆಂದು ಮಾಡಿದ್ದೇವೆ. ಇತಿಹಾಸವನ್ನ ತಿರುಚಿ ರಾಜಕೀಯಕ್ಕೋಸ್ಕರ ಮಾಡಬಾರದು. ರಾಜಕೀಯ ಮಾಡೋಣ ಅಂದ್ರೆ ಬಹಳಷ್ಟು ಇದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಇಲ್ಲ ಸಲ್ಲದ ದ್ವೇಷಕ್ಕೋಸ್ಕರ ರಾಜಕಾರಣ ಮಾಡಬಾರದು ಎಂದು ಹೇಳಿದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow