ಇದು ಎದೆ ನಡುಗಿಸೋ ಸುದ್ದಿ ಮರ್ರೆ: ಬೆಂಗಳೂರಿನ ನರ್ಸರಿ, ಎಲ್‌ಕೆಜಿ ಸ್ಕೂಲ್ ಫೀ ಎಷ್ಟು ಗೊತ್ತಾ!?

ಬೆಂಗಳೂರು:- ನಗರದ ಖಾಸಗಿ ಶಾಲೆ ಬರೀ ನರ್ಸರಿ ಮತ್ತು ಎಲ್.ಕೆ.ಜಿಯ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬರೋಬ್ಬರಿ 1.5 ಲಕ್ಷ ರೂ. ಶಾಲಾ ಶುಲ್ಕವನ್ನು ವಿಧಿಸಿದ್ದು, ಈ ದುಬಾರಿ ಶುಲ್ಕ ವಿವರದ ಫೋಟೋ ಇದೀಗ ವೈರಲ್ ಆಗುತ್ತಿದ್ದು, ಇದನ್ನೆಲ್ಲಾ ನೋಡ್ತಿದ್ರೆ ಸರ್ಕಾರಿ ಶಾಲೆಗಳೇ ಬೆಸ್ಟ್ ಅನ್ಸುತ್ತೆ ಎಂದು ನೆಟ್ಟಿಗರು ಹೇಳಿಕೊಂಡಿದ್ದಾರೆ.
2024-25 ರ ನರ್ಸರಿ ಮತ್ತು ಜ್ಯೂನಿಯರ್ ಕೆಜಿ ಬ್ಯಾಚ್‌ನ ಶಾಲಾ ಶುಲ್ಕ ರಶೀದಿಯ ಫೋಟೋ ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.
ಈ ಕುರಿತ ಪೋಸ್ಟ್ ಒಂದನ್ನು ಬೆಂಗಳೂರಿನ ವೈದ್ಯರಾದ ಡಾ. ಜಗದೀಶ್ ಚತುರ್ವೇದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕೇವಲ ಪೇರೆಂಟ್ ಓರಿಯೆಂಟೇಷನ್‌ಗೆ 8400 ಫೀಸ್ ಅಂತೆ, ಇದನ್ನೆಲ್ಲಾ ನೋಡಿ ಈಗ ನಾನು ಒಂದು ಶಾಲೆಯನ್ನು ತೆರೆಯಬೇಕೆಂದು ಪ್ಲಾನ್ ಮಾಡ್ತಿದ್ದೇನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






