ಇನ್ನೂ ಎರಡೂವರೆ ವರ್ಷ ನಾನೇ ಸಿಎಂ: ನವೆಂಬರ್ ಕ್ರಾಂತಿಗೆ ಸಿದ್ದರಾಮಯ್ಯ ಟಕ್ಕರ್
ಮೈಸೂರು: ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನವೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಎರಡನೇ ಬಾರಿ ಸಿಎಂ ಆಗಲ್ಲ ಅಂದಿದ್ದರು.
ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರ್ನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ ಎಂದರು.
ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಮತ್ತು ಅವರು ಹೇಳಿದಂತೆ ಕೇಳಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿಯವರು ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಹೇಳಿದರು.
ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?