ಇಲ್ಲೇ ಸ್ವರ್ಗ, ಇಲ್ಲೇ ನರಕ ಎಂದ ಕಿಚ್ಚ ಸುದೀಪ್: ಹೇಗಿರದೆ ಬಿಗ್ ಬಾಸ್ ಹೊಸ ಸೀಸನ್!

ಸೆಪ್ಟೆಂಬರ್ 22, 2024 - 10:36
 0  17
ಇಲ್ಲೇ ಸ್ವರ್ಗ, ಇಲ್ಲೇ ನರಕ ಎಂದ ಕಿಚ್ಚ ಸುದೀಪ್: ಹೇಗಿರದೆ ಬಿಗ್ ಬಾಸ್ ಹೊಸ ಸೀಸನ್!

ಬಿಗ್​ ಬಾಸ್​ ಕನ್ನಡ ಸೀಸನ್​  11 ಶುರುವಾಗ್ತಿದೆ. ಸೆಪ್ಟೆಂಬರ್ 29 ರಿಂದಲೇ ಮನೆ ಮನೆಯಲ್ಲೂ ಬಿಗ್​ ಬಾಸ್ ಕಹಳೆ ಮೊಳಗಲಿದೆ. ಕಲರ್ಸ್‌ ಕನ್ನಡ, ಇದೀಗ ಹೊಸ ಪ್ರೋಮೋ ಹೊರತಂದಿದೆ. ಈ ಪ್ರೋಮೋ ಬಿಗ್​ ಬಾಸ್​ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ. ಇಲ್ಲೇ ಸ್ವರ್ಗ, ಇಲ್ಲೇ ನರಕ ಎಂದ ಕಿಚ್ಚ ಸುದೀಪ್​, ಹೊಸ ಅಧ್ಯಾಯದಲ್ಲೂ ಅದೇ ಕಿಚ್ಚು ಅಂತಿದ್ದಾರೆ. ಬಿಗ್ ಬಾಸ್​​ ಪ್ರಸಾರದ ಟೈಮ್ ಕೂಡ ಲಾಕ್ ಆಗಿದೆ. 

ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 11 ಆರಂಭಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಈ ಬಾರಿನೂ ಕಿಚ್ಚ ಸುದೀಪ್ ನಿರೂಪಣೆ ಮಾಡೋದು ಬಹುತೇಕ ಕನ್ಪರ್ಮ್ ಆಗಿತ್ತು. ಅದಕ್ಕೆ ತಕ್ಕಂತೆ ಈಗ ಬಿಗ್‌ಬಾಸ್ ಕನ್ನಡ 11ರ ಪ್ರೋಮೊ ಕೂಡ ರಿಲೀಸ್ ಆಗಿದೆ. ಇದೇ ಸೆಪ್ಟೆಂಬರ್ 29ರಿಂದ ಬಿಗ್‌ ಬಾಸ್ ಕನ್ನಡ ಅದ್ಧೂರಿಯಾಗಿ ಆರಂಭ ಆಗಲಿದೆ.

ಸೆಪ್ಟೆಂಬರ್ 21 ರಂದು ಬಿಡುಗಡೆ ಆಗಿರುವ ಹೊಸ ಪ್ರೋಮೋನಲ್ಲಿ ಸುದೀಪ್ ಸ್ವರ್ಗ ಮತ್ತು ನರಕದ ಕತೆ ಹೇಳಿದ್ದಾರೆ. ಆ ಮೂಲಕ ಬಿಗ್​ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಸಣ್ಣ ಸುಳಿವೊಂದನ್ನು ನೀಡಿದ್ದಾರೆ. 

ಪ್ರೋಮೋದ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಅದೇ ವಿಡಿಯೋ ಮುಂದುವರೆದರೆ ನರಕದಂತೆ ಕಾಣುವ ಭೀಕರ ಪ್ರದೇಶದಲ್ಲಿ ತಟ್ಟೆಯಲ್ಲಿ ಗಂಜಿ ಕುಡಿಯುತ್ತಿದ್ದಾರೆ ಬೆಂಕಿಯ ಕುಲುಮೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಗ ಬರುವ ಸುದೀಪ್, ಸ್ವರ್ಗದಲ್ಲಿರುವವರು, ನರಕದಲ್ಲಿರುತ್ತಾರೆ ನರಕದಲ್ಲಿರುವವರು ಸ್ವರ್ಗದಲ್ಲಿರುತ್ತಾರೆ ಎಂದು ಬಿಗ್​ಬಾಸ್ ಶೈಲಿಯಲ್ಲಿ ಸ್ವರ್ಗ ನರಕದ ಜೀವನದ ಬಗ್ಗೆ ಹೇಳಿದ್ದಾರೆ.

ಯಾರು ಸ್ನೇಹಿತರಾಗುತ್ತಾರೆ ಎಂದು ನಂಬಿರುತ್ತೇವೆಯೋ ಅವರೇ ಬೆನ್ನಿಗೆ ಚೂರಿ ಹಾಕಬಹುದು, ಯಾರು ಚೂರಿ ಹಾಕುತ್ತಾರೆ ಎಂದುಕೊಂಡಿರುತ್ತೇವೆಯೋ ಅವರೇ ಸ್ನೇಹಿತರೂ ಆಗಬಹುದು ಎಂದು ಹೇಳಿದ್ದಾರೆ. ಆ ಮೂಲಕ ಬಿಗ್​ಬಾಸ್ ಮನೆಯಲ್ಲಿ ಯಾವ ಸಂಬಂಧವೂ ಶಾಶ್ವತವಲ್ಲ ಎಂದು ಸಹ ಹೇಳಿದ್ದಾರೆ. ಆ ಮೂಲಕ ಈ ಬಾರಿಯ ಬಿಗ್​ಬಾಸ್​ ಸುಲಭವಂತೂ ಆಗಿರುವುದಿಲ್ಲ, ಹಲವು ಟ್ವಿಸ್ಟ್ ಮತ್ತು ಟರ್ನ್​ಗಳನ್ನು ಒಳಗೊಂಡಿರುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಅಂದಹಾಗೆ ಕನ್ನಡ ಬಿಗ್​ಬಾಸ್ ಸೀಸನ್ 11 ಸೆಪ್ಟೆಂಬರ್ 29 ರಂದು ಪ್ರಾರಂಭವಾಗಲಿದೆ. ರಿಯಾಲಿಟಿ ಶೋನ ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 29 ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಅದರ ಬಳಿಕ ಪ್ರತಿದಿನ ರಾತ್ರಿ 9:30ಗೆ ಎಪಿಸೋಡ್​ಗಳು ಪ್ರಸಾರ ಆಗಲಿವೆ. ಈ ಬಾರಿ ಲೈವ್ ಇರುವುದಿಲ್ಲ ಎನ್ನಲಾಗುತ್ತಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow