ಇವರೆಂಥಾ ನೀಚ ಮಕ್ಕಳು: ತಾಯಿಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಟರು!

ಅಗರ್ತಲಾ:- ಘಟನೆ ಪಶ್ಚಿಮ ತ್ರಿಪುರಾದಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದ್ದು, ಇಬ್ಬರು ಮಕ್ಕಳು ಸೇರಿ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.
ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.
ಹತ್ಯೆಗೀಡಾದ ಮಹಿಳೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






