ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ: ಬಿ.ವೈ ವಿಜಯೇಂದ್ರ
ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳೀದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರ ಪರ ಯೋಜನೆ ನೀಡಿದ್ರು. ಈಗ ಆ ಎಲ್ಲಾ ಯೋಜನೆ ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿ.ಆರ್ ಪಾಟೀಲ್ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು, ಅಲ್ಲಿಯೂ ಸಹ ಭ್ರಷ್ಟಾಚಾರ ನಡೆದಿರುವುದನ್ನ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲರನ್ನ ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?