ಈ ನಟಿ ನೆನಪಿದ್ದಾರಾ!? ಗಂಡ-ಹೆಂಡತಿ ಸೀರಿಯಲ್ ನಲ್ಲಿ ಫೇಮಸ್ ಆಗಿದ್ದ ನಿರುಷಾ ಗೌಡ ಕಮ್ ಬ್ಯಾಕ್!

ಸೆಪ್ಟೆಂಬರ್ 27, 2024 - 22:01
 0  12
ಈ ನಟಿ ನೆನಪಿದ್ದಾರಾ!? ಗಂಡ-ಹೆಂಡತಿ ಸೀರಿಯಲ್ ನಲ್ಲಿ ಫೇಮಸ್ ಆಗಿದ್ದ ನಿರುಷಾ ಗೌಡ ಕಮ್ ಬ್ಯಾಕ್!

ಗಂಡ ಹೆಂಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಪಡೆದಿದ್ದ ನಿರುಷಾ ಗೌಡ ಮತ್ತೆ ಕಮ್ ಬ್ಯಾಕ್ ಮಾಡ್ತಿದ್ದಾರೆ. ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು ವೀಕ್ಷಕರಿಗೆ ಹೇಳಲು ಸ್ಟಾರ್ ಸುವರ್ಣ ಸಜ್ಜಾಗಿದ್ದು, ಇದರ ಹೀರೋಯಿನ್ ಆಗಿ ನಿರುಷಾ ಗೌಡ ನಟಿಸುತ್ತಿದ್ದಾರೆ. 

ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು ವೀಕ್ಷಕರಿಗೆ ಹೇಳಲು ಸಜ್ಜಾಗಿದೆ ಸ್ಟಾರ್ ಸುವರ್ಣ.

ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು-ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ ಮಾರುವವಳಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ ಆಗಬೇಕೆಂಬ ಕನಸನ್ನು ಹೊಂದಿರುತ್ತಾಳೆ. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ

ಇನ್ನು, ಈ ಕಥೆಯ ನಾಯಕ ಅಜಿತ್, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಅಜಿತ್​ಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗೂ ಅಜಿತ್ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್​ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ

ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷಾ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗ್ತಿದೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow