ಉಗ್ರರನನ್ನು ಸದೆಬಡಿದು ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಕೊಡಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಉಗ್ರರನನ್ನು ಸದೆಬಡಿದು ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ್ದಾರೆ.ಕಾಶ್ಮೀರದ ಪ್ರಗತಿಯಿಂದ ಕೆಲವು ಶತ್ರುಗಳು ಸಂತೋಷವಾಗಿಲ್ಲ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ಘಟನೆಯು ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖಿತನನ್ನಾಗಿ ಮಾಡಿದೆ.
ಈ ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ನಂತರ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ತಿಳಿದಿದೆ. ಪಹಲ್ಗಾಮ್ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನಾ ಚಟುವಟಿಕೆಯ ಹತಾಶೆಯನ್ನು ತೋರಿಸುತ್ತದೆ, ಅವರ ಹೇಡಿತನವನ್ನು ತೋರಿಸುತ್ತದೆ.
ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈಗ ತಾನೇ ಎಲ್ಲಾ ವಿಚಾರಗಳಲ್ಲೂ ಸಮೃದ್ಧವಾಗಿರುವ ಕಾಶ್ಮೀರವನ್ನು ಹಳೆಯ ಪರಿಸ್ಥಿತಿಗೆ ತಂದು ನಿಲ್ಲಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ಮರಳುತ್ತಿದ್ದ ಸಮಯದಲ್ಲಿ, ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿತ್ತು, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿದ್ದವು, ಪ್ರಜಾಪ್ರಭುತ್ವ ಬಲಗೊಳ್ಳುತ್ತಿತ್ತು, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬಂದಿತ್ತು, ಜನರ ಆದಾಯ ಹೆಚ್ಚುತ್ತಿತ್ತು, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದವು. ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ಶತ್ರುಗಳಿಗೆ ಇದು ಇಷ್ಟವಾಗಲಿಲ್ಲ.
ಈ ಭಯೋತ್ಪಾದಕ ದಾಳಿಯ ನಂತರ, ಪ್ರಪಂಚದಾದ್ಯಂತ ನಿರಂತರವಾಗಿ ಸಂತಾಪ ಸೂಚಿಸಲಾಗುತ್ತಿದೆ. ಜಾಗತಿಕ ನಾಯಕರು ಕೂಡ ನನಗೆ ಕರೆ ಮಾಡಿದ್ದಾರೆ, ಪತ್ರ ಬರೆದಿದ್ದಾರೆ. ಈ ಘೋರ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಬಲವಾಗಿ ಖಂಡಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






