ಉತ್ತರಕಾಶಿಯಲ್ಲಿ ಮೇಘಸ್ಫೋಟ: ಕ್ಷಣಾರ್ಧದಲ್ಲಿ ಕೊಚ್ಚಿ ಹೋದ ಗ್ರಾಮ! ಹಲವರು ನಾಪತ್ತೆ

ಆಗಸ್ಟ್ 5, 2025 - 18:14
 0  8
ಉತ್ತರಕಾಶಿಯಲ್ಲಿ ಮೇಘಸ್ಫೋಟ: ಕ್ಷಣಾರ್ಧದಲ್ಲಿ ಕೊಚ್ಚಿ ಹೋದ ಗ್ರಾಮ! ಹಲವರು ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿವೆ. ಈ ದುರಂತದಲ್ಲಿ ಗ್ರಾಮ ಸಂಪೂರ್ಣವಾಗಿ ನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಭೀಕರ ಪ್ರವಾಹದಲ್ಲಿ ಅನೇಕ ಮನೆಗಳು, ರಸ್ತೆಗಳು ಹಾಗೂ ಮೂಲಸೌಕರ್ಯಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಯ ಮತ್ತು ಆತಂಕ ಮೂಡಿಸಿದೆ.

ಸ್ಥಳಕ್ಕೆ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಸೇನಾ ಪಡೆಗಳು ಧಾವಿಸಿ ರಕ್ಷಣಾ ಹಾಗೂ ಶೋಧ ಕಾರ್ಯಚರಣೆ ಕೈಗೊಂಡಿವೆ. ವರದಿಗಳ ಪ್ರಕಾರ, ಈ ದುರಂತದಲ್ಲಿ ಒಂದು ಪೂರ್ಣ ಹಳ್ಳಿ ಕೊಚ್ಚಿ ಹೋಗಿರುವುದಾಗಿ ಅಂದಾಜಿಸಲಾಗಿದೆ.

ಸ್ಥಳೀಯ ಆಡಳಿತ, ವಿಪತ್ತು ನಿರ್ವಹಣಾ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪರಿಶ್ರಮಿಸುತ್ತಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮುಂದುವರಿದಿದ್ದು, ಪೀಡಿತರ ಪೋಷಕರಿಗೆ ನೆರವು ನೀಡಲು ತಾತ್ಕಾಲಿಕ ತಂಗುದಾಣಗಳ ವ್ಯವಸ್ಥೆ ಮಾಡಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow