ಉದ್ಯೋಗ ಮಾಹಿತಿ: JNCASRಯಲ್ಲಿದೆ ಭರ್ಜರಿ ಕೆಲಸ.. ಆಸಕ್ತರು ಅಪ್ಲೈ ಮಾಡಿ!

ಕೆಲಸ ಇಲ್ಲದೇ ಖಾಲಿ ಕೂತಿರುವ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
JNCASR ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR )
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಸಂಬಳ: ತಿಂಗಳಿಗೆ ರೂ.31000/-
JNCASR ನೇಮಕಾತಿ ಅರ್ಹತಾ ವಿವರಗಳು:
ಶೈಕ್ಷಣಿಕ ಅರ್ಹತೆ: JNCASR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ anand@jncasr.ac.in ಇ-ಮೇಲ್ ಐಡಿಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಿ.
ನಿಮ್ಮ ಪ್ರತಿಕ್ರಿಯೆ ಏನು?






