ಉದ್ಯೋಗ ಮಾಹಿತಿ: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಹಲವು ಉದ್ಯೋಗ! ಆಸಕ್ತರು ಅಪ್ಲೈ ಮಾಡಿ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ 4000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನೇಮಕಾತಿ ನಡೆಯಲಿದೆ. ನಾಲ್ಕು ವರ್ಷದ ಅವಧಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 4000 ಹುದ್ದೆಗಳು. ಕರ್ನಾಟಕದಲ್ಲಿ 537 ಹುದ್ದೆಗಳ ಭರ್ತಿ.
ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.ವಯೋಮಿತಿ:ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಮಾಸಿಕ ₹12 ಸಾವಿರದಿಂದ ₹15 ಸಾವಿರ ರೂ ಗೌರವಧನ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಒಬಿಸಿ, ಇಡಬ್ಲ್ಯುಸಿ ಅಭ್ಯರ್ಥಿಗಳಿಗೆ 800 ರೂ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 600 ರೂ, ವಿಶೇಷಚೇತನ ಅಭ್ಯರ್ಥಿಗಳಿಗೆ 400 ರೂ ಅರ್ಜಿ ಶುಲ್ಕವಿದೆ
ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆ ಮೇಲೆ ಆಯ್ಕೆ ಮಾಡಲಾಗುತ್ತದೆ. ಮಾ.11 ಅರ್ಜಿ ಸಲ್ಲಿಸಲು ಕಡೆಯ ದಿನ. ಈ ಕುರಿತು ಹೆಚ್ಚಿನ ವಿವರಗಳಿಗೆ bankofbaroda.in ಇಲ್ಲಿಗೆ ಭೇಟಿ ನೀಡಿ.
ನಿಮ್ಮ ಪ್ರತಿಕ್ರಿಯೆ ಏನು?






