ಊಟಕ್ಕೆ ಕುಳಿತ್ತಿದ್ದೇ ತಡ ದಿಢೀರ್ ಕಾಣಿಸಿಕೊಂಡ ಎದೆನೋವು..! ಹೃದಯಾಘಾತದಿಂದ ವ್ಯಕ್ತಿ ಸಾವು

ಜೂನ್ 22, 2025 - 12:06
 0  15
ಊಟಕ್ಕೆ ಕುಳಿತ್ತಿದ್ದೇ ತಡ ದಿಢೀರ್ ಕಾಣಿಸಿಕೊಂಡ ಎದೆನೋವು..! ಹೃದಯಾಘಾತದಿಂದ ವ್ಯಕ್ತಿ ಸಾವು

ಆಧುನಿಕ ಜಗತ್ತಿನಲ್ಲಿ ಹೃದಯಾಘಾತವು ಮೂಕ ಕೊಲೆಗಾರನಾಗುತ್ತಿದೆ.. ವಾಸ್ತವವಾಗಿ ಹೃದಯಾಘಾತವು ಮಾರಣಾಂತಿಕ ವೈದ್ಯಕೀಯ ಸ್ಥಿತಿಯಾಗಿದೆ. ಹೃದಯಾಘಾತವು ಇದ್ದಕ್ಕಿದ್ದಂತೆ ಬರುತ್ತದೆ ಎಂದು ಹಲವರು ಭಾವಿಸಿದ್ದರೂ, ವಾಸ್ತವವು ಸಂಪೂರ್ಣವಾಗಿ ವಿಭಿನ್ನವಾಗಿದೆ. ಹೃದಯಾಘಾತ ಸಂಭವಿಸುವ ಮೊದಲುಇದೀಗ ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲಕತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು

ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ಮನೆಗೆ ಬಂದಿದ್ದರು. ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow