ಎಂಸಿಜಿ ಮೈದಾನದಲ್ಲಿ ಇಂದು ಭಾರತ-ಆಸಿಸ್ ಮುಖಾಮುಖಿ: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ?

ಅಕ್ಟೋಬರ್ 31, 2025 - 08:02
 0  15
ಎಂಸಿಜಿ ಮೈದಾನದಲ್ಲಿ ಇಂದು ಭಾರತ-ಆಸಿಸ್ ಮುಖಾಮುಖಿ: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎರಡನೇ ಟಿ20 ಕ್ರಿಕೆಟ್ ಪಂದ್ಯ ಇಂದು ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯವು ಮಳೆಯಿಂದ ರದ್ದಾಗಿರುವ ಕಾರಣ, ಟೀಮ್ ಇಂಡಿಯಾ ತನ್ನ ಬಳಗದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.
 
ಆದರೆ ಒಂದು ಬದಲಾವಣೆ ಸಾಧ್ಯತೆ ಇದ್ದರೆ ಅದು ನಿತೀಶ್ ಕುಮಾರ್ ರೆಡ್ಡಿ ಸ್ಥಾನದಲ್ಲಿ ಇರಬಹುದು. ನಿತೀಶ್ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ವೈದ್ಯರು ಅವರಿಗೆ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಅವರು ದ್ವಿತೀಯ ಹಾಗೂ ತೃತೀಯ ಪಂದ್ಯಗಳಲ್ಲೂ ಕಣಕ್ಕಿಳಿಯುವ ಸಾಧ್ಯತೆ ಇಲ್ಲ.
 
ಅದರೆ ಕ್ಯಾನ್‌ಬೆರಾದಲ್ಲಿ ಕಣಕ್ಕಿಳಿದ ಬಳಗವನ್ನೇ ದ್ವಿತೀಯ ಪಂದ್ಯದಲ್ಲೂ ಭಾರತ ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರ್ಷದೀಪ್ ಸಿಂಗ್‌ ಬದಲಿಗೆ ಹರ್ಷಿತ್ ರಾಣಾ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚು.
 
ದ್ವಿತೀಯ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ:
 
ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಜಸ್‌ಪ್ರೀತ್ ಬುಮ್ರಾ.
 
ಇಂದು ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಜಯ ಸಾಧಿಸುವ ನಿರೀಕ್ಷೆಯಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow