ಎಚ್ಚರ: 'ವಿಷ' ಆಗುತ್ತಿದೆ ನೀರು: ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ!

ಬೆಂಗಳೂರು:- ನೀವು ವಾಟರ್ ಬಾಟಲ್ ನಲ್ಲಿ ನೀರು ಕುಡಿಯುತ್ತಿದ್ದರೆ ಇಂದೇ ಬಿಟ್ಟುಬಿಡಿ. ಇಲ್ಲೊಂದು ಶಾಕಿಂಗ್ ವರದಿ ನಿಮಗೆ ಸಿಕ್ಕಿದೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಬೆಂಗಳೂರಿನಂತಹ ಮಹಾನಗರಗಳಲ್ಲಿ ಕುಡಿಯುವ ನೀರು ವಿಷವಾಗುತ್ತಿದೆಯೇ ಅನ್ನೋ ಆತಂಕ ಜನರನ್ನು ಆವರಿಸಿದೆ.
ರಾಜ್ಯದಲ್ಲಿ ಪೂರೈಕೆಯಾಗುತ್ತಿರುವ ಕುಡಿಯುವ ಮಿನರಲ್ ವಾಟರ್ ಬಾಟಲ್‌ಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿರುವುದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ವರದಿಯಿಂದ ತಿಳಿದುಬಂದಿದೆ.
ಇತ್ತೀಚೆಗೆ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಸುಮಾರು 160 ಮಿನರಲ್ ವಾಟರ್ ಬಾಟಲ್‌ಗಳನ್ನ ಸ್ಯಾಂಪಲ್ ಟೆಸ್ಟ್‌ಗೆ ಕಳುಹಿಸಿತ್ತು. ಈ ಪೈಕಿ ಈಗಾಗಲೇ 100ಕ್ಕೂ ಹೆಚ್ಚು ಬಾಟಲ್‌ಗಳ ವರದಿ ಕೈಸೇರಿದೆ. ಇಲಾಖೆ ಕಳುಹಿಸಿದ್ದ ಮಾದರಿಗಳಲ್ಲಿ 50% ನೀರು ಅನ್‌ಸೇಫ್ ಆಗಿದೆ. ಲೋಕಲ್ ಮಿನರಲ್ ವಾಟರ್ ಅನ್ ಸೇಫ್ ಅಂತ ರಿಪೋರ್ಟ್ ಬಂದಿರುವುದಾಗಿ ತಿಳಿದುಬಂದಿದೆ.
ಮಿನರಲ್ ವಾಟರ್ ಬಾಟಲ್ ವರದಿಯಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ತುಂಬಾ ಸಮಯದಿಂದ ನೀರು ಶೇಖರಣೆ ಮಾಡುವುದರಿಂದ ಪಾಚಿ ಅಂಶಗಳು ಕಂಡುಬಂದಿವೆ. ಅಲ್ಲದೇ ಕೆಲ ಕಂಪನಿಗಳು ಕಲುಷಿತ ನೀರು, ಬೋರ್ವೆಲ್ ನೀರನ್ನು ಬಾಟಲ್ ಮೂಲಕ ಮಾರಾಟ ಮಾಡುತ್ತಿದ್ದದ್ದು ಕಂಡುಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






