ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಈ ದಿನ ರಾಜ್ಯಾದ್ಯಂತ ಮದ್ಯ ಬಂದ್!

ನವೆಂಬರ್ 14, 2024 - 15:54
 0  37
ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಈ ದಿನ ರಾಜ್ಯಾದ್ಯಂತ ಮದ್ಯ ಬಂದ್!

ಬೆಂಗಳೂರು:- ಅಬಕಾರಿ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಿ ಮತ್ತು ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 20 ರಂದು ಕರ್ನಾಟಕದಲ್ಲಿ ಮದ್ಯ ಮಾರಾಟ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮದ್ಯ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.

ಇದು ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಅಂದ್ರೆ ತಪ್ಪಾಗೋದಿಲ್ಲ. ಇದೇ ತಿಂಗಳಲ್ಲಿ ಒಂದು ದಿನ ಕರ್ನಾಟಕದಲ್ಲಿ ಎಣ್ಣೆ ಮಾರಾಟ ನಿಷೇಧ ಮಾಡಲಾಗಿದೆ. 

ಅಬಕಾರಿ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow