ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಓಲಾ ಬೈಕ್ ಶೋ ರೂಮ್ಗೆ ಬೆಂಕಿ ಹಚ್ಚಿದ ವ್ಯಕ್ತಿ

ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಓಲಾ ಬೈಕ್ ಶೋ ರೂಮ್ಗೆ ಬೆಂಕಿ ಹಚ್ಚಿದ ವ್ಯಕ್ತಿ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್ಗೆ ಬೆಂಕಿ ಇಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಕಿರಾತಕನೋರ್ವ ಬೆಂಕಿ ಹಚ್ಚಿದ್ದಾನೆ. ನಿನ್ನೆ ಬೆಳಿಗ್ಗೆ ಶೋ ರೂಂ ಬೆಂಕಿ ತಗುಲಿತ್ತು. ಆರಂಭದಲ್ಲಿ ಎಲ್ಲರೂ ಶಾಟ್೯ ಸಕ್ರ್ಯೂಟ್ ನಿಂದ ಬೆಂಕಿ ತಗುಲಿದೆ ಎಂದುಕೊಂಡಿದ್ದರು. ಆದರೆ ಪೊಲೀಸರ ತನಿಖೆ ವೇಳೆ ಬೆಂಕಿ ಹಚ್ಚಿದ್ದು ಪತ್ತೆಯಾಗಿದೆ.
ಮಹಮ್ಮದ್ ನದೀಮ್ ಎಂಬ ವ್ಯಕ್ತಿ ತನ್ನ ಏಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ ವಾಗ್ವಾದ ಮಾಡಿ ಬಳಿಕ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿದ್ದು ಬಯಲಾಗಿದೆ. ಘಟನೆ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






