ಏಕದಿನ ಕ್ರಿಕೆಟ್ʼನಲ್ಲಿ ವಿಶೇಷ ಮೈಲುಗಲ್ಲು: ವಿಶೇಷ ದಾಖಲೆ ಬರೆದ ರಶೀದ್ ಖಾನ್
ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್ನಲ್ಲಿ ರಶೀದ್ ಖಾನ್ ವಿಶೇಷ ದಾಖಲೆ ಬರೆದಿದ್ದಾರೆ. ಅಬುಧಾಬಿಯಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಓವರ್ಗಳನ್ನು ಎಸೆದ ರಶೀದ್ ಖಾನ್ ಕೇವಲ 38 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂರು ವಿಕೆಟ್ಗಳೊಂದಿಗೆ ರಶೀದ್ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ಗಳನ್ನು ಪೂರೈಸಿದ್ದಾರೆ
ಈ ಮೂಲಕ ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ಗಳನ್ನು ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಒನ್ ಡೇ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ನಲ್ಲಿ 200 ವಿಕೆಟ್ ಉರುಳಿಸಿದ ವಿಶ್ವದ 2ನೇ ಸ್ಪಿನ್ನರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಅಫ್ಘಾನಿಸ್ತಾನದ ಮಾಜಿ ಸ್ಪಿನ್ನರ್ ಸಖ್ಲೈನ್ ಮುಷ್ತಾಕ್. ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ ಕಬಳಿಸಿದ ಸಖ್ಲೈನ್ ತೆಗೆದುಕೊಂಡಿರುವುದು ಕೇವಲ 104 ಇನಿಂಗ್ಸ್ಗಳನ್ನು ಮಾತ್ರ. ಈ ಮೂಲಕ ಒನ್ಡೇ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ನಲ್ಲಿ 200 ವಿಕೆಟ್ ಕಬಳಿಸಿದ ಸ್ಪಿನ್ನರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?