ಕನ್ನಡದಲ್ಲಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಗೌತಮ್!

ಮಾರ್ಚ್ 22, 2025 - 18:42
 0  13
ಕನ್ನಡದಲ್ಲಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಗೌತಮ್!

ತಮಿಳಿನ ಖ್ಯಾತ ನಿರ್ದೇಶಕ ಗೌತಮ್ ಅವರು ಕನ್ನಡದಲ್ಲಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಈ ವರ್ಷ ನಾನು ಕನ್ನಡ ಸಿನಿಮಾ ಮಾಡುವ ಆಲೋಚನೆ ಹೊಂದಿದ್ದೇನೆ. ದೊಡ್ಡ ಸಿನಿಮಾ ನಿರ್ಮಿಸುವ ಪ್ಲ್ಯಾನ್‌ಯಿದೆ ಎಂದಿದ್ದಾರೆ. ದಕ್ಷಿಣದ ಜೊತೆಗೆ ಬಾಲಿವುಡ್‌ನಲ್ಲೂ ನಾನು ಹೆಚ್ಚಿನ ಸಿನಿಮಾಗಳನ್ನು ಮಾಡಿದ್ದೇನೆ. ನಾನು ಯಾವಾಗಲೂ ಭಾಷೆಯ ಗಡಿ ದಾಟಲು ಇಷ್ಟಪಡುತ್ತೇನೆ. ಈಗ ನಾನು ಕನ್ನಡದಲ್ಲಿ ಸಿನಿಮಾ ಮಾಡಲು ಗುರಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.

ಕನ್ನಡ ನಾನು ಮಾತನಾಡುವ ಭಾಷೆಯಲ್ಲ. ಆದರೆ ನನಗೆ ಗೊತ್ತಿಲ್ಲದ ಭಾಷೆಯಲ್ಲಿ ಸಿನಿಮಾ ಮಾಡುವ ಸವಾಲನ್ನು ಸ್ವೀಕರಿಸಲು ರೆಡಿಯಾಗಿದ್ದೇನೆ ಎಂದು ಕನ್ನಡ ಸಿನಿಮಾ ಮಾಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸ್ಯಾಂಡಲ್‌ವುಡ್‌ನ ಯಾವ ನಟರೊಂದಿಗೆ ಅವರು ಸಿನಿಮಾ ಮಾಡಲಿದ್ದಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಕನ್ನಡದಲ್ಲಿ ನಟಿಸಲು ಪರಭಾಷೆಯ ನಟಿಯರು ಹಿಂದೇಟು ಹಾಕುತ್ತಿದ್ದ ಸಮಯವೊಂದಿತ್ತು. ತೆಲುಗು, ತಮಿಳಿನಲ್ಲಿ ಅವಕಾಶ ಸಿಗದೇ ಹೋದಾಗ ಕನ್ನಡದ ಕಡೆಗೆ ನಟಿಯರು ಮುಖ ಮಾಡುತ್ತಿದ್ದರು, ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆಂದರೆ ಅವರ ಆಫರ್​ಗಳು ಕಡಿಮೆ ಆಗಿವೆ ಎಂದರ್ಥ ಎಂಬ ಮಾತು ಸಹ ಇತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಕನ್ನಡದ ಸಿನಿಮಾಗಳಲ್ಲಿ ನಟಿಸಲು ಬಾಲಿವುಡ್ ನಟಿಯರು ಸಹ ಹಿಂದೆ-ಮುಂದೆ ನೋಡುತ್ತಿಲ್ಲ. ಕನ್ನಡದ ನಟರನ್ನು ಹುಡುಕಿಕೊಂಡು ಬಾಲಿವುಡ್​ನಿಂದ ನಿರ್ಮಾಪಕರು ಬರುತ್ತಿದ್ದಾರೆ. ಇದೀಗ ತಮಿಳಿನ ಪ್ರತಿಭಾವಂತ ನಿರ್ದೇಶಕರೊಬ್ಬರು ಕನ್ನಡದಲ್ಲಿ ಸಿನಿಮಾ ಮಾಡಲು ಬರುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow