ಕನ್ನಡಿಗರ ಭಾವನೆಗೆ ಧಕ್ಕೆ ತಂದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು!

ಬೆಂಗಳೂರು:- ಕನ್ನಡಿಗರ ಭಾವನೆಗೆ ಧಕ್ಕೆ ತಂದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಏಪ್ರಿಲ್ 25-26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ಎ. ಅವರು ಈ ದೂರು ಸಲ್ಲಿಸಿದ್ದರು.
ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ.
ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






