ಕನ್ನಡಿಗರಿಗೆ ಅಪಮಾನ ಪ್ರಕರಣ: ಮ್ಯಾನೇಜರ್ ಅರೆಸ್ಟ್..! ಜಿಎಸ್ ಸೂಟ್ ಹೋಟೆಲ್ ಸೀಜ್

ಮೇ 18, 2025 - 12:18
 0  4
ಕನ್ನಡಿಗರಿಗೆ ಅಪಮಾನ ಪ್ರಕರಣ: ಮ್ಯಾನೇಜರ್ ಅರೆಸ್ಟ್..! ಜಿಎಸ್ ಸೂಟ್ ಹೋಟೆಲ್ ಸೀಜ್

ಕೋರಮಂಗಲದ ಹೋಟೆಲ್ ಒಂದರಲ್ಲಿ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ. ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮ್ಯಾನೇಜರ್ ಸರ್ಫಜ್​​ ಎಂಬಾತನನ್ನು ಬಂಧಿಸಲಾಗಿದ್ದು, ಕನ್ನಡಿಗರಿಗೆ ಅಪಮಾನ ಮಾಡಿದ್ದ ಜಿ.ಎಸ್​.ಸೂಟ್ಹೋಟೆಲ್​​ ಸೀಜ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಹೋಟೆಲ್​​ ಮಾಲೀಕ ಜಮ್ಸದ್ ವಿರುದ್ಧ ಎಫ್ಐಆರ್ದಾಖಲಿಸಲಾಗಿದೆ.

ನಮ್ಮನೆಲದ ಅನ್ನ ತಿಂದು ನಮ್ಮನ್ನೇ ಅವಮಾನಿಸುತ್ತಿದ್ದಾರೆ.‌ ಪದೆ-ಪದೇ ಕನ್ನಡಿಗರನ್ನ ಕೆರಳಿಸುತ್ತಿದ್ದಾರೆಕೋರಮಂಗಲದ‌‌ ನೆಕ್ಸಸ್ ಮಾಲ್ ಸಮೀಪದಲ್ಲಿ ಜಿ.ಎಸ್​.ಸೂಟ್ಹೋಟೆಲ್ಇದೆ. ಹೋಟೆಲ್​​ ಹೊರಭಾಗದ ಡಿಸ್ಪ್ಲೇ ಬೋರ್ಡ್ನಲ್ಲಿ ನಿನ್ನೆ ರಾತ್ರಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದರು. ಅದನ್ನ ಗಮನಿಸಿದ ಸ್ಥಳೀಯರು ವಿಡಿಯೋ ಮಾಡಿದ್ದು, ಸೋಶಿಯಲ್ಮೀಡಿಯಾದಲ್ಲಿ ವೈರಲ್ಮಾಡಿದ್ದಾರೆ. ಬಳಿಕ ವಿಡಿಯೋ ನೋಡ್ತಿದ್ದಂತೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ.

ವೇಳೆ ತಕ್ಷಣ ಅಲರ್ಟ್ ಆದ ಮಡಿವಾಳ ಪೊಲೀಸರು ಹೋಟೆಲ್ಗೆ ಬಂದು ಪರಿಶೀಲನೆ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಅಬ್ದುಲ್ಸಮಾದ್ ಹಾಗೂ ಮ್ಯಾನೇಜರ್ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಜೊತೆಗೆ ಡಿಸ್ಪ್ಲೇ ಬೋರ್ಡ್ ವಶಕ್ಕೆ ಪಡೆದು, ಹೋಟೆಲ್ ಮೇಲೆ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.‌

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow