ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ!

ಬೆಂಗಳೂರು: ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹೌದು ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ.
ಇನ್ನು ನವೆಂಬರ್ 23 ರಂದು ಮತಎಣಿಕೆ ನಡದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕ ಉಪ ಚುನಾವಣೆ ಕುರಿತು ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ.ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






