ಕಲ್ಯಾಣ ಕರ್ನಾಟಕಕ್ಕೆ ಈ ವರ್ಷ 5 ಸಾವಿರ ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಚಾರಗಳನ್ನು ಚರ್ಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಚಾರಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11,770 ಕೋಟಿ ರೂ. ಬೀದರ್, ರಾಯಚೂರು ನಗರ ಪಾಲಿಕೆ ಮಾಡಲು ತೀರ್ಮಾನಿಸಲಾಗಿದೆ.
ಬೀದರ್ ಮತ್ತು ಕಲಬುರಗಿಯಲ್ಲಿ ಕುಡಿಯುವ ನೀರು ಯೋಜನೆ ಮಾಡಲಾಗುವುದು. 7,200 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ನಾರಾಯಣಪುರ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯ ಬಗ್ಗೆ ಕೇಂದ್ರಕ್ಕೂ ಮಾಹಿತಿ ನೀಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಸಚಿವರು ಹಾಗೂ ಹೈದರಾಬಾದ್ ಕರ್ನಾಟಕದ ಭಾಗದ ಶಾಸಕರು ಕಲಬುರಗಿಯಲ್ಲೇ ಸಂಪುಟ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದರು. ಹೀಗಾಗಿ ಕಲಬುರಗಿಯಲ್ಲೇ ಸಂಪುಟ ಸಭೆ ಮಾಡೋಣ ಎಂದಿದ್ದೆ.
ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 371ಜೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಸಂವಿಧಾನದಲ್ಲಿ ಸೇರ್ಪಡೆಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಈ ವರ್ಷ 5 ಸಾವಿರ ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ. ಕೃಷಿ ಇಲಾಖೆಗೆ 100 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ. ಬಜೆಟ್ನಲ್ಲಿ ಘೋಷಿಸಿದ್ದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






